ತಡರಾತ್ರಿಯಲ್ಲಿ ಎಸ್ ಪಿ ಬಿ ಅವರ ಹೆಲ್ತ್ ಬು’ಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ..

ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಚೇತರಿಕೆಗಾಗಿ ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.. ಎಸ್ ಪಿ ಬಿ ಅವರು ಆದಷ್ಟು ಬೇಗ ಗುಣಮುಖರಾಗಿ ಮರಳುವಂತಾಗಲಿ ಎಂದು ದೇವರಲ್ಲಿ ಮೊರೆ ಹೋಗುತ್ತಿದ್ದಾರೆ.. ಆದರೆ ದಿನದಿಂದ ದಿನಕ್ಕೆ ಎಸ್ ಪಿ ಬಿ ಅವರ ಆರೋಗ್ಯ ಸ್ಥಿತಿ ಮಾತ್ರ ಗಂಭೀರವಾಗುತ್ತಿದ್ದು ಈ ಬಗ್ಗೆ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದೆ..

ಹೌದು ಕೊರೋನಾ ವೈರಸ್ ಕಾರಣ ಆಗಸ್ಟ್​ 5 ರಂದು ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್​ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೆಂಟಿಲೇಟರ್​ ಅಳವಡಿಸಿ ನುರಿತ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದೆ..

ಇತ್ತೀಚೆಗಷ್ಟೇ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿತ್ತು ಎಂದು ಅವರ ಪುತ್ರ ಚರಣ್ ತಿಳಿಸಿದ್ದರು. ಜೊತೆಗೆ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಥಮ್ಸ್​ ಅಪ್​ ತೋರಿಸಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು, ಇದನ್ನು ನೋಡಿದ ಅಭಿಮಾನಿಗಳು ಕೊಂಚ ನಿರಾಳರಾಗಿದ್ದರು. ಆದರೆ ಇದೀಗ ಮತ್ತೆ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿರುವುದರಿಂದ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ..

ಇನ್ನು ನಿನ್ನೆಯಷ್ಟೇ ಎಸ್ ಪಿ ಬಿ ಅವರ ಪುತ್ರ ಚರಣ್ ಅವರು ಅಪ್ಪನ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿಲ್ಲ.. ಆದರೆ ನಾವು ನಂಬಿಕೆ ಕಳೆದುಕೊಂಡಿಲ್ಲ.. ದೇವರನ್ನು ನಂಬಿದ್ದೇವೆ.. ನಿಮ್ಮೆಲ್ಲರ ಪ್ರಾರ್ಥನೆಗೆ ಧನ್ಯವಾದಗಳು.. ಎಂದಿದ್ದರು..

ಇದರ ಬೆನ್ನಲ್ಲೇ ನಿನ್ನೆ ತಡ ರಾತ್ರಿ ಎಸ್ ಪಿ ಬಿ ಅವರಿಗೆ ಚಿಕಿತ್ಸೆ ನೀಡಿತ್ತಿರುವ ಚೆನ್ನೈನ ಆಸ್ಪತ್ರೆ ಹೆಲ್ತ್ ಬು’ಲೆಟಿನ್ ಬಿಡುಗಡೆ ಮಾಡಿದೆ.. “ಎಸ್ ಪಿ ಬಿ ಅವರಿಗೆ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರೆದಿದ್ದು, ಎಕ್ಮೋ ಮಷಿನ್​, ವೆಂಟಿಲೇಟರ್​​ನಲ್ಲೇ ಇದ್ದಾರೆ ಎಂದು ತಿಳಿಸಿದೆ. ಇದರ ಜತೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.”