ಕರ್ನಾಟಕ ರತ್ನ ಪ್ರಶಸ್ತಿ ಸಿಗುತ್ತಿದ್ದಂತೆ ಅಶ್ವಿನಿ ಅವರು ಮಾಡಿರುವ ಕೆಲಸ ನೋಡಿ..

ಎರಡು ದಿನದ ಹಿಂದಷ್ಟೇ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಯಿತು. ಪುನೀತ್ ಪತ್ನಿ ಅಶ್ವಿನಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿ, ಸರಕಾರಕ್ಕೆ ಧನ್ಯವಾಗಳನ್ನು ತಿಳಿಸಿದರು. ಮಳೆಯ ನಡುವೆಯೂ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರೆ, ತಮಿಳು ನಟ ರಜನಿಕಾಂತ್, ತೆಲುಗು ನಟ ಜ್ಯೂನಿಯರ್ ಎನ್.ಟಿ.ಆರ್, ನಟ ಶಿವರಾಜ್ ಕುಮಾರ್, ಸುಧಾಮೂರ್ತಿ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಮನೆಗೆ ಆಗಮಿಸಿದ ಪುನೀತ್ ಪತ್ನಿ ಅಶ್ವಿನಿ ಹಾಗೂ ಪುತ್ರಿ ಪ್ರಶಸ್ತಿಯ ಮೆಡಲ್ ಅನ್ನು ಪುನೀತ್ ಅವರ ಫೋಟೋಗೆ ಅರ್ಪಿಸಿದರು. ಈ ಮೂಲಕ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪುಗೆ ತಲುಪಿಸಿದ್ದು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ಪುನೀತ್ ಅವರ ಫೋಟೋ ಮೇಲೆಯೆ ಅವರ ತಂದೆ ಮತ್ತು ತಾಯಿಯ ಫೋಟೋ ಕೂಡ ಇದ್ದ ಕಾರಣಕ್ಕಾಗಿ ಇಬ್ಬರು ಕರ್ನಾಟಕ ರತ್ನಗಳಿಗೆ ಒಂದು ರೀತಿಯಲ್ಲಿ ಗೌರವ ಸೂಚಿಸುವ ಕ್ಷಣವೂ ಅದಾಗಿತ್ತು. ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಪುನೀತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದು, ಸಿನಿಮಾ ರಂಗದಿಂದ ಇಂಥದ್ದೊಂದು ಗೌರವಕ್ಕೆ ಪಾತ್ರರಾದ ಎರಡನೇ ಗಣ್ಯವ್ಯಕ್ತಿ ಇವರಾಗಿದ್ದಾರೆ.

ಕರ್ನಾಟಕ ರತ್ನ ಪ್ರಶಸ್ತಿ ಪ್ರಾರಂಭವಾದಾಗ ಮೊದಲ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಮತ್ತು ಡಾ.ರಾಜ್ ಕುಮಾರ್ ಅವರಿಗೆ ದೊರೆತಿತ್ತು. ಮೂವತ್ತು ವರ್ಷಗಳ ನಂತರ ಮತ್ತೆ ಸಿನಿಮಾ ರಂಗಕ್ಕೆ ಅದರಲ್ಲೂ ಡಾ.ರಾಜ್ ಕುಟುಂಬಕ್ಕೆ ಈ ಗೌರವ ದೊರೆತಿದೆ. ಹಾಗಾಗಿಯೇ ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಹಾಜರಿದ್ದರು. ಡಾ.ರಾಜ್ ಕುಮಾರ್ ಅವರ ಅಷ್ಟೂ ಮಕ್ಕಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ವಿಶೇಷ.

ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಅವರ ನೆಚ್ಚಿನ ನಟರಾಗಿದ್ದ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಹಾಗೂ ಗೆಳೆಯ ಮತ್ತು ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಸುಧಾಮೂರ್ತಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಸಚಿವರಾದ ವಿ.ಸುನೀಲ್ ಕುಮಾರ್, ಆರ್.ಅಶೋಕ್, ಮುನಿರತ್ನ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಶಸ್ತಿ ಪ್ರದಾನಕ್ಕೂ ಮುನ್ನ ಕನ್ನಡದ ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದಿಂದ ಕನ್ನಡದ ಗೀತೆಗಳು ಮತ್ತು ಪುನೀತ್ ರಾಜ್ ಕುಮಾರ್ ನಟನೆಯ ಹಾಡುಗಳನ್ನು ಹೇಳಲಾಯಿತು. ಪುನೀತ್ ಹಾಡಿದ ಹಾಡುಗಳಿಗೂ ಕಲಾವಿದರು ದನಿಯಾಗಿದ್ದು ವಿಶೇಷವಾಗಿತ್ತು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್, ಶ್ರೀ ಅಂಬಾ ಭವಾನಿ ದೈವ ಶಕ್ತಿ ಜ್ಯೋತಿಷ್ಯರು.. ಮೊ.9845642321 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ‌ ಉಲ್ಭಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ.. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ.. ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.. 9845642321 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ತೊಂದರೆ ಪ್ರೀತಿಯಲ್ಲಿ ನಂಬಿ ಮೋಸ.. ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ವಿಚಾರ ಜನರ ದೃಷ್ಟಿಯಿಂದ ಮನೆಯಲ್ಲಿ ಆಗುವ ತೊಂದರೆ ಹಣಕಾಸಿನ ತೊಂದರೆ ಸ್ತ್ರೀ ಪುರುಷ ವಶೀಕರಣ ಇನ್ನೂ ಅನೇಕ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321