ಬ್ರೇಕಿಂಗ್ ನ್ಯೂಸ್..‌ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಪಾಸಿಟಿವ್..

ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ ಸಾವಿರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ.. ಅದರಲ್ಲೂ ಇಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಸೋಂಕು ಕಾಣಿಸಿಕೊಂಡಿದೆ.. ಸಾಮಾನ್ಯನಿಂದ ಸಿರಿವಂತನವರೆಗೂ ಕಾಣಿಸಿಕೊಳ್ಳುತ್ತಿರುವ ಈ ಕೊರೊನಾ ಇತ್ತೀಚೆಗೆ ಜನರ ಸಂಪರ್ಕಕ್ಕೆ ಹೆಚ್ಚು ಬರುವ ರಾಜಕಾರಣಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು ಮೊನ್ನೆಮೊನ್ನೆಯಷ್ಟೇ ಸಚಿವ ಸುಧಾಕರ್ ಅವರ ಮನೆಯಲ್ಲಿ ಪತ್ನಿ, ಮಗಳು, ತಂದೆ, ಮನೆ ಕೆಲಸದವರು ಎಲ್ಲರಲ್ಲಿಯೂ ಕಾಣಿಸಿಕೊಂಡಿತು.. ಇದೀಗ ಮಂಡ್ಯ ಲೋಕಸಭಾ ಸದಸ್ಯೆಯಾಗಿರುವ ಸುಮಲತಾ ಅಂಬರೀಶ್ ಅವರಲ್ಲಿಯೂ ಕೊರೊನಾ ಪಾಸಿಟಿವ್ ಆಗಿದೆ..

ಹೌದು ಈ ಬಗ್ಗೆ ಖುದ್ದು ಸುಮಲತಾ ಅವರೇ ಮಾಹಿತಿ ನೀಡಿದ್ದು “ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ. ಸುಮಲತಾ ಅಂಬರೀಷ್..‌” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.. ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಕಾಣಿಸಿಕೊಂಡಿದ್ದರಿಂದ ಅವರ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ..