ರಾಮ ಮಂದಿರ ನಿರ್ಮಾಣಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಕೋಟಿಗಳೆಷ್ಟು.. ಅಸಲಿ ಕತೆ..

ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಗಳು ಹರಿದಾಡುತ್ತವೆ.‌ ಕೆಲವೊಂದಕ್ಕೆ ತಲೆ ಬುಡವೂ ಇರೋದಿಲ್ಲ‌.. ಕೆಲವೊಂದು ವಿಚಾರ ಸತ್ಯವಾದರೆ ಕೆಲವೊಂದು ಸತ್ಯಕ್ಕೆ ನೂರು ಮೈಲಿ ದೂರವಿರುತ್ತದೆ.. ಆದರೆ ಇಂತಹ ಸುದ್ದಿಗಳಿಂದ ಸುಮ್ಮನೆ ಕೆಲವರಿಗೆ ಕೆಟ್ಟ ಹೆಸರಷ್ಟೇ.. ಅದ್ಯಾಕಾಗಿ ಈ ರೀತಿ ಸುದ್ದಿ ಹಬ್ಬಿಸುವರೋ ತಿಳಿಯದು‌‌.. ಆದರೆ ಕೆಲವೊಂದು ವಿಚಾರಗಳು ಸತ್ಯವೂ ಇರುತ್ತದೆ.. ಹೌದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಕುರಿತು ಒಂದು ಮುಖ್ಯ ವಿಚಾರ ಹರಿದಾಡುತ್ತಿದೆ.. ಅದುವೇ ರಾಮಮಂದಿರಕ್ಕೆ ಯಶ್ ದೇಣಿಗೆ ಕೊಟ್ಟ ವಿಚಾರ..

ಹೌದು ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎನ್ನುವ ಗಾದೆ ಮಾತೇ ಇದೆ. ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಯಶ್ 50 ಕೋಟಿ ರೂ. ದೇಣಿಗೆ ಕೊಟ್ಟಿದ್ದಾರೆ ಎನ್ನುವ ಸುದ್ದಿ ಕಳೆದೆರಡು ದಿನಗಳಿಂದ ಹರಿದಾಡ್ತಿದೆ. ಕೆಜಿಎಫ್ ಸಿನಿಮಾ 1300 ಕೋಟಿ ರೂ. ಕಲೆಕ್ಷನ್ ಮಾಡಿ ಸದ್ದು ಮಾಡಿದ್ದ ಬೆನ್ನಲ್ಲೇ ಈಗೊಂದು ಸುದ್ದಿ ನೋಡಿ ಕೆಲವರು ನಿಜ ಎಂದುಕೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಸೂಪರ್ ಹಿಟ್ ಆದ ಖುಷಿಯಲ್ಲಿದ್ದಾರೆ. ಇತ್ತೀಚೆಗೆ ಮಡದಿ ರಾಧಿಕಾ ಪಂಡಿತ್ ಜೊತೆ ವಿದೇಶ ಪ್ರವಾಸಕ್ಕೂ ಹೋಗಿ ಬಂದಿದ್ದರು. ಯಶ್‌ ಮುಂದಿನ ಸಿನಿಮಾ ಯಾವುದು ಅನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ರಾಕಿಂಗ್ ಸ್ಟಾರ್ ಮಾತ್ರ ಸರಿಯಾದ ಕಥೆ ಸಿಗುವವರೆಗೂ ಮಾತನಾಡುವುದು ಬೇಡ ಎಂದು ನಿರ್ಧರಿಸಿದ್ದಾರೆ. ಕೆಜಿಎಫ್ ಸರಣಿ ಸಿನಿಮಾಗಳ ರೀತಿಯಲ್ಲೇ ಮತ್ತೊಂದು ಹೈವೋಲ್ಟೇಜ್ ಪ್ರಾಜೆಕ್ಟ್‌ಗೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಇತ್ತೀಚೆಗೆ ನಟಿ, ಸಂಸದೆ ಸುಮಲತಾ ಅಂಬರೀಶ್ ಬರ್ತ್‌ಡೇ ಪಾರ್ಟಿಯಲ್ಲಿ ಯಶ್ ಭಾಗವಹಿಸಿದ್ದರು..

ಯಶ್ ಮುಂದಿನ ಸಿನಿಮಾ ಯಾವುದು ಅನ್ನುವ ಚರ್ಚೆಯ ನಡುವೆ ಹೊಸ ಸುದ್ದಿ ಅಭಿಮಾನಿಗಳ ಹುಬ್ಬೇರಿಸಿದೆ. ಯಶ್ ರಾಮ ಮಂದಿರ ನಿರ್ಮಾಣಕ್ಕೆ ಐವತ್ತು ಕೋಟಿ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ ಎನ್ನುವ ಸುದ್ದಿ ಕೇಳಿ ಕೆಲವರು ಅಚ್ಚರಿಗೊಂಡಿದ್ದಾರೆ. ಆದರೆ ಇದು ಸತ್ಯವಲ್ಲ ಎನ್ನುವುದು ಖಚಿತವಾಗುತ್ತಿದೆ. ಒಂದು ವೇಳೆ ಯಶ್ ನಿಜಕ್ಕೂ ಅಷ್ಟು ದೊಡ್ಡ ಮೊತ್ತದ ಹಣವನ್ನು ದೇಣಿಗೆಯಾಗಿ ನೀಡಿದ್ದರೆ ಇಷ್ಟೊತ್ತಿಗೆ ದೊಡ್ಡ ಸುದ್ದಿ ಆಗುತ್ತಿತ್ತು. ಇದು ಕೇವಲ ಗಾಳಿಸುದ್ದಿ ಅಷ್ಟೆ ಅನ್ನುವುದು ಸ್ಪಷ್ಟವಾಗುತ್ತಿದೆ.

50 ಕೋಟಿ ದೇಣಿಗೆ ಸುದ್ದಿ ಹುಟ್ಟಿಕೊಂಡಿದ್ದು ಹೇಗೆ ಎಂದು ನೋಡಿದಾಗ ಇತ್ತೀಚೆಗೆ ಸಂತೋಷ್ ತ್ರಿಪಾಠಿ ಅನ್ನುವ ಫೇಸ್‌ಬುಕ್ ಖಾತೆಯಲ್ಲಿ ಯಶ್ ದೇವಸ್ಥಾನದಲ್ಲಿ ಇರುವ ಫೋಟೊವೊಂದರನ್ನು ಶೇರ್ ಮಾಡಿದ್ದರು. ದಕ್ಷಿಣದ ಸ್ಟಾರ್ ನಟ ಯಶ್‌ ಕುಮಾರ್ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಂದಿರ ನಿರ್ಮಾಣಕ್ಕೆ 50 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ ಎಂದು ಫೋಟೊ ಜೊತೆಗೆ ಬರೆದಿದ್ದರು. ಈ ಪೋಸ್ಟ್ ವೈರಲ್ ಆಗಿ ಇಂತಾದೊಂದು ಸುದ್ದಿ ಹರಿದಾಡಲು ಶುರುವಾಗಿತ್ತು.

ಯಶ್ ತಿರುಪತಿಗೆ ಭೇಟಿ ನೀಡಿದ್ದ ಫೋಟೊ.. ಅಸಲಿಗೆ ರಾಕಿಂಗ್ ಸ್ಟಾರ್ ಯಶ್ ರಾಮಮಂದಿರಕ್ಕೆ ಭೇಟಿ ಕೊಟ್ಟೇ ಇಲ್ಲ. ಕೆಜಿಎಫ್ 2 ಸಿನಿಮಾ ಬಿಡುಗಡೆಯ ಸಮಯದಲ್ಲಿ ಯಶ್ ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಈ ವೇಳೆ ದೇವಸ್ಥಾನದಲ್ಲಿ ತೆಗೆದ ಫೋಟೊ ಇದು. ಇದೇ ಫೋಟೋವನ್ನು ಯಾರೋ ರಾಮಮಂದಿರಕ್ಕೆ ಭೇಟಿ ನೀಡಿದ್ದ ಫೋಟೊ ಎಂದು ಹೇಳಿ 50 ಕೋಟಿ ರೂ. ದೇಣಿಗೆ ಸುದ್ದಿಯನ್ನು ಹಬ್ಬಿಸಿದ್ದಾರೆ.

ಆರೇಳು ವರ್ಷಗಳ ಕಾಲ ಯಶ್ KGF ಸರಣಿ ಚಿತ್ರಗಳಿಗಾಗಿ ವ್ಯಯಸಿದ್ದರು. ಅದರ ಫಲವಾಗಿ ಇವತ್ತು ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಮೆರೆಯುತ್ತಿದ್ದಾರೆ. ಚಿತ್ರವೊಂದಕ್ಕೆ 30ರಿಂದ 40 ಕೋಟಿ ರೂ. ಸಂಭಾವನೆ ಪಡೆಯುವ ಮಟ್ಟಿಗೆ ಬೆಳೆದಿದ್ದಾರೆ. ಬಾಲಿವುಡ್ ನಿರ್ಮಾಪಕರು ಕೂಡ ಯಶ್ ಜೊತೆ ಸಿನಿಮಾ ಮಾಡಲು ಮುಗಿಬಿದ್ದಿದ್ದಾರೆ. ಅಕ್ಕಪಕ್ಕದ ಇಂಡಸ್ಟ್ರಿಗಳ ಸ್ಟಾರ್ ನಿರ್ದೇಶಕರು ರಾಕಿಭಾಯ್‌ಗೆ ಕಥೆ ಸಿದ್ಧಪಡಿಸುತ್ತಿದ್ದಾರೆ. ಕೆಜಿಎಫ್ 2 ನಂತರ ಮುಂದೇನು ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ. ಯಶ್ ಮುಂದಿನ ಸಿನಿಮಾ ಯಾವುದು ಅನ್ನು ಮಿಲಿಯನ್ ಡಾಲರ್ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ. ನರ್ತನ್ ಕಾಂಬಿನೇಷನ್ ಸಿನಿಮಾ ತಡವಾಗುತ್ತಿದೆ. ಹಾಗಾದರೆ ಯಶ್ ಮುಂದಿನ ಚಿತ್ರಕ್ಕೆ ಯಾರು ಆಕ್ಷನ್ ಕಟ್ ಹೇಳುತ್ತಾರೆ? ಕತೆ ಏನು? ಸಿನಿಮಾ ಯಾವಾಗ ಸೆಟ್ಟೇರುತ್ತದೆ ಎಂದು ಕಾತರದಿಂದ ಎಲ್ಲರೂ ಕಾಯುವಂತಾಗಿದೆ.. ಇಂತಹ ಸಮಯದಲ್ಲಿ ಐವತ್ತು ಕೋಟಿ ರೂಪಾಯಿ ದೇಣಿಗೆ ಎಂದು ಇಲ್ಲ ಸಲ್ಲದ ಸುದ್ದಿ ಹಬ್ಬಿಸಿ ತಮಾಷೆ ನೋಡುವ ಜನರಿಂದಾಗಿ ಸ್ಟಾರ್ ಗಳು ಮುಜುಗರದ ಸನ್ನಿವೇಶವನ್ನು ಎದುರಿಸುವಂತಾಗದಿರಲಿ ಅಷ್ಟೇ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622